ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ (ತಿದ್ದುಪಡಿ) ಮಸೂದೆ, 2025
ಇದೀಗ ಸುದ್ದಿಯಲ್ಲಿದೆ:
- ಇತ್ತೀಚೆಗೆ, ‘ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ (ತಿದ್ದುಪಡಿ) ಮಸೂದೆ, 2025’ ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಈ ಮಸೂದೆಯ ಪ್ರಮುಖ ಅಂಶಗಳು:
- ಸದಸ್ಯರ ನಾಮನಿರ್ದೇಶನ:- ಪರಿಶಿಷ್ಟ ಪಂಗಡಕ್ಕೆ (ST) ಸೇರಿದ ಒಬ್ಬ ವ್ಯಕ್ತಿ ಮತ್ತು ಒಬ್ಬ ಮಹಿಳೆಯನ್ನು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲು ಉದ್ದೇಶಿಸಿದೆ.
- ಉದ್ದೇಶ:- ಸರ್ಕಾರದಿಂದ ಹೊಸ ದತ್ತಾಂಶ ಅಥವಾ ಮಾಹಿತಿಯನ್ನು ಸ್ವೀಕರಿಸಿದ ನಂತರ, ಪರಿಶಿಷ್ಟ ಜಾತಿಗಳ ಉಪ -ವರ್ಗೀಕರಣದ ಮೀಸಲಾತಿ ಶೇಕಡಾವಾರು ಪ್ರಮಾಣದಲ್ಲಿ ಅಗತ್ಯ ಮಾರ್ಪಾಡುಗಳನ್ನು ಮಾಡಲು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಅಧಿಕಾರ ನೀಡುವ ಉದ್ದೇಶವನ್ನು ಈ ಮಸೂದೆಯು ಹೊಂದಿದೆ.



ನಿಮ್ಮದೊಂದು ಉತ್ತರ