ಕಲ್ಯಾಣ ಕರ್ನಾಟಕ
ಇದೀಗ ಸುದ್ದಿಯಲ್ಲಿದೆ:
- ಕರ್ನಾಟಕ ಆರ್ಥಿಕ ಸಮೀಕ್ಷೆ, 2025-26ರ ಪ್ರಕಾರ, ರಾಜ್ಯದ ತಲಾ ಆದಾಯದ (PCI) ಪಟ್ಟಿಯಲ್ಲಿ ಕಲಬುರಗಿ ಜಿಲ್ಲೆಯು ಅತ್ಯಂತ ಕೆಳಹಂತದಲ್ಲಿದೆ. ಇದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಾಗುತ್ತಿರುವ ಪ್ರಾದೇಶಿಕ ಅಸಮತೊಲನೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ.
ಕರ್ನಾಟಕ ಸರ್ಕಾರದ ಪ್ರದೇಶ ಆಧಾರಿತ ಉಪಕ್ರಮಗಳು:
ಈ ಯೋಜನೆಗಳು ನಿರ್ದಿಷ್ಟವಾಗಿ ಕಲ್ಯಾಣ ಕರ್ನಾಟಕ ಜಿಲ್ಲೆಗಳನ್ನು ಗುರಿಯಾಗಿಸಿಕೊಂಡಿವೆ ಅವುಗಳೆಂದರೆ- ಕಲಬುರಗಿ, ಯಾದಗಿರಿ, ರಾಯಚೂರು, ಬೀದರ, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ:
- ಕಲ್ಯಾಣ ಪಥ:- 38 ಕಲ್ಯಾಣ ಕರ್ನಾಟಕ ವಿಧಾನಸಭಾ ಕ್ಷೇತ್ರಗಳಾದ್ಯಂತ 1,150 ಕಿ.ಮೀ ಉದ್ದದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ₹1,000 ಕೋಟಿ ಮೊತ್ತದ ಯೋಜನೆಯನ್ನು ರೂಪಿಸಲಾಗಿದೆ.
- ಕಲ್ಯಾಣ ಕರ್ನಾಟಕ ಸಮಗ್ರ ಆರೋಗ್ಯ ಯೋಜನೆ:- ₹873 ಕೋಟಿ ಮೊತ್ತದ ಈ ಯೋಜನೆಯಡಿ,
- ಬೀದರ್ ಜಿಲ್ಲೆಯಲ್ಲಿ ಕ್ಯಾನ್ಸರ್ ರೋಗನಿರ್ಣಯ ಘಟಕ ಸ್ಥಾಪನೆ.
- ಕೊಪ್ಪಳ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ.
- ಎಲಿವೇಟ್ ಕಲ್ಯಾಣ ಕರ್ನಾಟಕ:- ಈ ಪ್ರದೇಶದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ವಿಶೇಷವಾದ ‘ಸ್ಟಾರ್ಟ್ ಅಪ್’ (ನವೋದ್ಯಮ) ನಿಧಿ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ.
- ನನ್ನ ಗುರುತು:- 1,000 ಗ್ರಾಮ ಪಂಚಾಯಿತಿಗಳಲ್ಲಿ ‘ಡಿಜಿಲಾಕರ್’ ಅಪ್ಲಿಕೇಶನ್ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC/ST) ಗ್ರಾಮೀಣ ನಿವಾಸಿಗಳಿಗೆ ಸರ್ಕಾರಿ ದಾಖಲೆಗಳನ್ನು ಸುರಕ್ಷಿತವಾಗಿ ಒದಗಿಸುವುದು ಈ ಯೋಜನೆಯ ಗುರಿಯಾಗಿದೆ.
- ಶಿಕ್ಷಣ ಮತ್ತು ಕೌಶಲ್ಯ ತರಬೇತಿ:- ಯಲಬುರ್ಗಾ, ಜೇವರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುತ್ತದೆ, ಹಾಗೂ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕರಿಗೆ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತದೆ.
ಪ್ರಮುಖ ಕಲ್ಯಾಣ ಮತ್ತು ರಾಜ್ಯ ಯೋಜನೆಗಳು:
ಈ ಭಾಗದ ನಿವಾಸಿಗಳು ಕರ್ನಾಟಕ ಸರ್ಕಾರದ ಪ್ರಮುಖ “ಐದು ಗ್ಯಾರಂಟಿ” ಯೋಜನೆಗಳು ಮತ್ತು ಇತರ ಇಲಾಖಾ ಕಾರ್ಯಕ್ರಮಗಳ ಲಾಭವನ್ನು ಪಡೆಯಲು ಅರ್ಹರಾಗಿದ್ದಾರೆ:
ಐದು ಗ್ಯಾರಂಟಿ ಯೋಜನೆಗಳು:
- ಗೃಹ ಲಕ್ಷ್ಮಿ:- ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಮಾಸಿಕ ₹2,000 ಆರ್ಥಿಕ ನೆರವು ನೀಡಲಾಗುತ್ತದೆ.
- ಗೃಹ ಜ್ಯೋತಿ:- ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ವಿದ್ಯುತ್ ಬಳಸುವ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸಲಾಗುತ್ತದೆ.
- ಅನ್ನ ಭಾಗ್ಯ:- ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬಗಳಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತದೆ.
- ಶಕ್ತಿ:- ರಾಜ್ಯದೊಳಗೆ ಪ್ರಯಾಣಿಸುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿದೆ.
- ಯುವ ನಿಧಿ:- ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವ ಯುವಕರಿಗೆ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ.
ಇತರೆ ಯೋಜನೆಗಳು:
- ಗಂಗಾ ಕಲ್ಯಾಣ ಯೋಜನೆ:- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (SC/ST) ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೊಳವೆಬಾವಿ, ಪಂಪ್ಸೆಟ್ ಮತ್ತು ವಿದ್ಯುದ್ದೀಕರಣ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
- ಉದ್ಯೋಗಿನಿ ಯೋಜನೆ:- ಸಣ್ಣ ಉದ್ಯಮಗಳನ್ನು ಪ್ರಾರಂಭಿಸಲು ಮಹಿಳಾ ಉದ್ಯಮಿಗಳಿಗೆ ಶೇಕಡಾ 50% ರಷ್ಟು ಸಬ್ಸಿಡಿಯೊಂದಿಗೆ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತದೆ.



ನಿಮ್ಮದೊಂದು ಉತ್ತರ