ಕರ್ನಾಟಕ ಎಲೆಕ್ಟ್ರಿಕ್ ಬಸ್ ಕಾರ್ಯಕ್ರಮ (KEBP)
ಇದೀಗ ಸುದ್ದಿಯಲ್ಲಿದೆ:
- ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ಉದ್ದೇಶದಿಂದ, ಕರ್ನಾಟಕ ಸರ್ಕಾರವು ತನ್ನ 2026-27ನೇ ಸಾಲಿನ ರಾಜ್ಯ ಮುಂಗಡ ಪತ್ರದಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ ₹2,000 ಕೋಟಿ ವೆಚ್ಚದ ಎಲೆಕ್ಟ್ರಿಕ್ ಬಸ್ ಕಾರ್ಯಕ್ರಮವನ್ನು ಘೋಷಿಸಿದೆ.
ಕರ್ನಾಟಕ ಎಲೆಕ್ಟ್ರಿಕ್ ಬಸ್ ಕಾರ್ಯಕ್ರಮದ (KEBP) ಪ್ರಮುಖಾಂಶಗಳು:
- ಈ ಉಪಕ್ರಮವು, ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ ಹೊಸದಾಗಿ 4,000 ಎಲೆಕ್ಟ್ರಿಕ್ ಬಸ್ಗಳನ್ನು ಸೇರ್ಪಡೆಗೊಳಿಸುವ ಮತ್ತು 94 ಚಾರ್ಜಿಂಗ್ ಡಿಪೋಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ.
- ಸಾರಿಗೆ ಸಾಮರ್ಥ್ಯ ವಿಸ್ತರಣೆ:- ಈ ಉಪಕ್ರಮವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸೇರಿದಂತೆ ರಾಜ್ಯದ ಇತರ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಸೇವೆಗಳನ್ನು ಮೇಲ್ದರ್ಜೆಗೇರಿಸುವ ಗುರಿಯನ್ನು ಹೊಂದಿದೆ.
- ಮೂಲಸೌಕರ್ಯ ಅಭಿವೃದ್ಧಿ:- ಈ ಕಾರ್ಯಕ್ರಮದ ಅಡಿಯಲ್ಲಿ BMTC ಗಾಗಿ 32 ಎಲೆಕ್ಟ್ರಿಕ್ ಬಸ್ ಡಿಪೋಗಳನ್ನು ಹಾಗೂ ಇತರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಿಗಾಗಿ 62 ಡಿಪೋಗಳನ್ನು ನಿರ್ಮಿಸಲಾಗುತ್ತದೆ.
- ಗ್ರಾಮೀಣ ಪ್ರದೇಶಗಳಿಗೆ ಆದ್ಯತೆ:- ಅಂದಾಜು 1,950 ಎಲೆಕ್ಟ್ರಿಕ್ ಬಸ್ಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಸಾರಿಗೆ ಸಂಪರ್ಕವನ್ನು ಸುಧಾರಿಸಲು ವಿಶೇಷವಾಗಿ ಮೀಸಲಿಡಲಾಗುತ್ತದೆ.
- ಮುಖ್ಯ ಉದ್ದೇಶಗಳು:- ರಾಜ್ಯದಾದ್ಯಂತ ವಾಯು ಮಾಲಿನ್ಯವನ್ನು ತಗ್ಗಿಸುವುದು, ಇಂಧನ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ಸಾರ್ವಜನಿಕ ಸಾರಿಗೆ ಸಂಪರ್ಕವನ್ನು ಉತ್ತಮಗೊಳಿಸುವುದು.



ನಿಮ್ಮದೊಂದು ಉತ್ತರ