ಮೀರತ್ ಬ್ಯೂಗಲ್ ವಾದ್ಯ
ಸಾಮಾನ್ಯ ಅಧ್ಯಯನ -3/ ಆರ್ಥಿಕತೆ

ಇದೀಗ ಸುದ್ದಿಯಲ್ಲಿದೆ:
- ದಶಕಗಳಿಂದಲೂ ಸಶಸ್ತ್ರ ಪಡೆಗಳ ಕಸರತ್ತು, ಯುದ್ಧಗಳು, ಸಮಾರಂಭಗಳು ಮತ್ತು ಪಥಸಂಚಲನಗಳಲ್ಲಿ ಅವಿಭಾಜ್ಯ ಸಾಧನವಾಗಿ ಬಳಕೆಯಾಗುತ್ತಿದ್ದ ‘ಬ್ಯೂಗಲ್’ ವಾದ್ಯವು ಇತ್ತೀಚೆಗೆ ಪ್ರತಿಷ್ಠಿತ “ಭೌಗೋಳಿಕ ಸೂಚ್ಯಂಕ” (GI) ಟ್ಯಾಗ್‌ಗೆ ಭಾಜನವಾಗಿದೆ.
ಮೀರತ್ ಬ್ಯೂಗಲ್ ವಾದ್ಯದ ಬಗ್ಗೆ:
- ಮೀರತ್‌ನಲ್ಲಿ ಬ್ಯೂಗಲ್ ತಯಾರಿಕೆಯು 19ನೇ ಶತಮಾನದಷ್ಟು ಹಳೆಯ ಇತಿಹಾಸವನ್ನು ಹೊಂದಿದೆ.
- ಭಾರತದ ಸೇನಾ ಸಂಸ್ಕೃತಿ ಬೆಳೆದಂತೆಲ್ಲಾ, ಈ ವಾದ್ಯದ ಇತಿಹಾಸವೂ ಅದರೊಂದಿಗೇ ಸಾಗಿಬಂದಿದೆ.
- ಬ್ರಿಟಿಷರ ಕಾಲದಲ್ಲಿ ಇದನ್ನು ‘ಆದೇಶ ನೀಡುವ ಸಾಧನ’ವಾಗಿ ಬಳಸುತ್ತಿದ್ದರು. ಸೇನೆ ಎಷ್ಟೇ ಆಧುನಿಕವಾದರೂ, ಬ್ಯೂಗಲ್ ತನ್ನ ಗೌರವದ ಸ್ಥಾನವನ್ನು ಇಂದಿಗೂ ಉಳಿಸಿಕೊಂಡಿದೆ.
ಸರ್ಕಾರಿ ಭದ್ರತಾ ಪತ್ರಗಳು (G-Secs)
ಸಾಮಾನ್ಯ ಅಧ್ಯಯನ – 3/ ಆರ್ಥಿಕತೆ
ಇದೀಗ ಸುದ್ದಿಯಲ್ಲಿದೆ:
- ಇತ್ತೀಚೆಗೆ, ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಕಡಿತಗೊಳಿಸಿದ್ದರೂ ಸಹ, ಸರ್ಕಾರಿ ಭದ್ರತಾ ಪತ್ರಗಳ ಇಳುವರಿಯು ಸ್ವಲ್ಪಮಟ್ಟಿಗೆ ಏರುಗತಿಯನ್ನು ಸಾಧಿಸಿದೆ.
ಸರ್ಕಾರಿ ಭದ್ರತಾ ಪತ್ರ (G-Sec) ಗಳ ಬಗ್ಗೆ:
- ವ್ಯಾಖ್ಯಾನ:- ಈ ಪತ್ರಗಳು ಕೇಂದ್ರ ಸರ್ಕಾರ ಇಲ್ಲವೇ ರಾಜ್ಯ ಸರ್ಕಾರಗಳಿಂದ ಹೊರಡಿಸಲ್ಪಡುವ ಒಂದು ವ್ಯಾಪಾರಾರ್ಹ ಭದ್ರತಾ ಸಾಧನಗಳಾಗಿವೆ.
- ಹೊಣೆಗಾರಿಕೆ:- ಈ ಪತ್ರಗಳು ಸರ್ಕಾರದ ಸಾಲದ ಹೊಣೆಗಾರಿಕೆಯನ್ನು ಔಪಚಾರಿಕವಾಗಿ ಅಥವಾ ಅಧಿಕೃತವಾಗಿ ಅಂಗೀಕರಿಸುತ್ತವೆ.
- ಸ್ವರೂಪ: ಈ ಪತ್ರಗಳು ಅಲ್ಪಾವಧಿ ಮತ್ತು ದೀರ್ಘಾವಧಿ ಸ್ವರೂಪಗಳನ್ನು ಒಳಗೊಂಡಿರುತ್ತವೆ:
- ಅಲ್ಪಾವಧಿ ಭದ್ರತಾ ಪತ್ರಗಳು: ಇವುಗಳನ್ನು ಸಾಮಾನ್ಯವಾಗಿ ಖಜಾನೆ ಬಿಲ್ಲುಗಳು ಎಂದು ಕರೆಯಲಾಗುತ್ತದೆ. ಇವುಗಳ ಮೂಲದ ಮುಕ್ತಾಯ ಅವಧಿಯು ಒಂದು ವರ್ಷಕ್ಕಿಂತ ಕಡಿಮೆ ಇರುತ್ತದೆ.
- ದೀರ್ಘಾವಧಿ ಭದ್ರತಾ ಪತ್ರಗಳು: ಇವುಗಳನ್ನು ಸಾಮಾನ್ಯವಾಗಿ ಸರ್ಕಾರಿ ಬಾಂಡ್‌ಗಳು ಅಥವಾ ದಿನಾಂಕ ಸಹಿತ ಭದ್ರತಾ ಪತ್ರಗಳು ಎಂದು ಕರೆಯಲಾಗುತ್ತದೆ. ಇವುಗಳ ಮೂಲದ ಮುಕ್ತಾಯ ಅವಧಿಯು ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಇರುತ್ತದೆ.
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)
ಸಾಮಾನ್ಯ ಅಧ್ಯಯನ – 3/ ಆಂತರಿಕ ಭದ್ರತೆ
ಇದೀಗ ಸುದ್ದಿಯಲ್ಲಿದೆ:
- ‘ಅಂತರರಾಷ್ಟ್ರೀಯ ಹಡಗು ಮತ್ತು ಬಂದರು ಸೌಲಭ್ಯ ಭದ್ರತಾ ಸಂಹಿತೆ’ಯ (ISPS Code) ಅಡಿಯಲ್ಲಿ, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯನ್ನು ‘ಮಾನ್ಯತೆ ಪಡೆದ ಭದ್ರತಾ ಸಂಸ್ಥೆ’ ಯನ್ನಾಗಿ ಅಧಿಕೃತವಾಗಿ ನಾಮನಿರ್ದೇಶನ ಮಾಡಲಾಗಿದೆ.
- ಭಾರತದಲ್ಲಿ ಸುಮಾರು 250 ಬಂದರುಗಳಿದ್ದು, ಅವುಗಳಲ್ಲಿ 65–68 ಬಂದರುಗಳು ಸರಕು ಸಾಗಣೆ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ.
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಯ ಬಗ್ಗೆ:
-
- ಸ್ಥಾಪನೆ ಮತ್ತು ಸ್ಥಾನಮಾನ: ಇದು 1968 ರ ‘ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಕಾಯಿದೆ’ ಯ ಅನ್ವಯ 1969 ರಲ್ಲಿ ಅಸ್ತಿತ್ವಕ್ಕೆ ಬಂದ ಒಂದು ಅರೆಸೇನಾ ಪಡೆಯಾಗಿದೆ.
- ದಿನಾಚರಣೆ: ಪ್ರತಿ ವರ್ಷ ಮಾರ್ಚ್ 10 ರಂದು ‘CISF ಸ್ಥಾಪನಾ ದಿನ’ವನ್ನು ಆಚರಿಸಲಾಗುತ್ತದೆ.
- ಆಡಳಿತಾತ್ಮಕ ನಿಯಂತ್ರಣ: ಈ ಪಡೆಯು ಭಾರತ ಸರ್ಕಾರದ ಕೇಂದ್ರ ಗೃಹ ಸಚಿವಾಲಯದ ನೇರ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತದೆ.
- ಪ್ರಮುಖ ಕಾರ್ಯಗಳು: ದೇಶದ ತಂತ್ರಾತ್ಮಕ ಸಂಸ್ಥೆಗಳಿಗೆ ಭದ್ರತೆಯನ್ನು ಒದಗಿಸುವುದು ಇದರ ಪ್ರಮುಖ ಕರ್ತವ್ಯವಾಗಿದೆ. ಪ್ರಮುಖವಾಗಿ ಈ ಕೆಳಗಿನ ಸಂಸ್ಥೆಗಳಿಗೆ ಈ ಪಡೆಯು ರಕ್ಷಣೆ ನೀಡುತ್ತದೆ:
- ಬಾಹ್ಯಾಕಾಶ ಇಲಾಖೆ
- ಪರಮಾಣು ಶಕ್ತಿ ಇಲಾಖೆ
- ವಿಮಾನ ನಿಲ್ದಾಣಗಳು, ದೆಹಲಿ ಮೆಟ್ರೋ ಮತ್ತು ಬಂದರುಗಳು
- ಐತಿಹಾಸಿಕ ಸ್ಮಾರಕಗಳು
- ಭಾರತೀಯ ಆರ್ಥಿಕತೆಯ ಮೂಲಭೂತ ಕ್ಷೇತ್ರಗಳಾದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಿದ್ಯುಚ್ಛಕ್ತಿ, ಕಲ್ಲಿದ್ದಲು, ಉಕ್ಕು ಮತ್ತು ಗಣಿಗಾರಿಕೆ ಸ್ಥಾವರಗಳಿಗೆ ಇದು ಭದ್ರತೆಯನ್ನು ಒದಗಿಸುತ್ತದೆ.
ಸಂವಿಧಾನದ ವಿಧಿ 240
ಸಾಮಾನ್ಯ ಅಧ್ಯಯನ – 2/ ಆಡಳಿತ
ಇದೀಗ ಸುದ್ದಿಯಲ್ಲಿದೆ:
- ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ, ಚಂಡೀಗಢವನ್ನು ಸಂವಿಧಾನದ ‘ವಿಧಿ 240’ ರ ವ್ಯಾಪ್ತಿಗೆ ತರಲು ಯಾವುದೇ ‘ಸಂವಿಧಾನ ತಿದ್ದುಪಡಿ ಮಸೂದೆ’ಯನ್ನು ಮಂಡಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯವು ಸ್ಪಷ್ಟಪಡಿಸಿದೆ.
131 ನೇ ಸಂವಿಧಾನ ತಿದ್ದುಪಡಿ ಮಸೂದೆ, 2025 ರ ಬಗ್ಗೆ:
- ಈ ಮಸೂದೆಯು ಚಂಡೀಗಢವನ್ನು ವಿಧಿ 240 ರ ಅಡಿಯಲ್ಲಿ ತರಲು ಪ್ರಸ್ತಾಪಿಸುತ್ತದೆ. ಈ ಮೂಲಕ ಶಾಸಕಾಂಗಗಳನ್ನು ಹೊಂದಿರದ ಕೇಂದ್ರಾಡಳಿತ ಪ್ರದೇಶಗಳ ಗುಂಪಿಗೆ ಇದನ್ನು ಸೇರಿಸುತ್ತದೆ ಮತ್ತು ಅದಕ್ಕಾಗಿ ನಿಯಮಾವಳಿಗಳನ್ನು ರೂಪಿಸಲು ರಾಷ್ಟ್ರಪತಿಯವರಿಗೆ ಅಧಿಕಾರ ನೀಡುತ್ತದೆ.
- ಇದು ಚಂಡೀಗಢ ಕೇಂದ್ರಾಡಳಿತ ಪ್ರದೇಶದಲ್ಲಿ ಸ್ವತಂತ್ರ ‘ಆಡಳಿತಾಧಿಕಾರಿ’ಯ ನೇಮಕಕ್ಕೆ ದಾರಿ ಮಾಡಿಕೊಡುತ್ತದೆ.
- ಪ್ರಸ್ತುತ, ಪಂಜಾಬ್‌ನ ರಾಜ್ಯಪಾಲರೇ ಚಂಡೀಗಢದ ಆಡಳಿತಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
- ಚಂಡೀಗಢಕ್ಕಾಗಿ ಕೇಂದ್ರ ಸರ್ಕಾರದ ಕಾನೂನು ರಚನಾ ಪ್ರಕ್ರಿಯೆಯನ್ನು ಸರಳಗೊಳಿಸುವುದು ಈ ಕ್ರಮದ ಉದ್ದೇಶವಾಗಿದೆ.
- ಶಾಸಕಾಂಗಗಳನ್ನು ಹೊಂದಿರದ ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಆಡಳಿತದಲ್ಲಿ ಏಕರೂಪತೆಯನ್ನು ಖಚಿತಪಡಿಸುವುದು ಇದರ ಗುರಿಯಾಗಿದೆ.
- ಸಂಸತ್ತಿನ ಕಾಯಿದೆಗಳಿಗೆ ಸಮನಾದ ನಿಯಮಾವಳಿಗಳನ್ನು ಚಂಡೀಗಢಕ್ಕಾಗಿ ರೂಪಿಸಲು ರಾಷ್ಟ್ರಪತಿಯವರಿಗೆ ಅಧಿಕಾರ ನೀಡುವುದು ಇದರ ಉದ್ದೇಶವಾಗಿದೆ.
ಸಂವಿಧಾನದ 240 ನೇ ವಿಧಿಯ ಬಗ್ಗೆ:
- ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಹಾಗೂ ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು ಸೇರಿದಂತೆ, ನಿರ್ದಿಷ್ಟ ಕೇಂದ್ರಾಡಳಿತ ಪ್ರದೇಶಗಳ ಶಾಂತಿ, ಪ್ರಗತಿ ಮತ್ತು ಪರಿಣಾಮಕಾರಿ ಆಡಳಿತಕ್ಕಾಗಿ ನಿಯಮಾವಳಿಗಳನ್ನು ರೂಪಿಸುವ ಅಧಿಕಾರವನ್ನು ಸಂವಿಧಾನದ 240 ನೇ ವಿಧಿಯು ರಾಷ್ಟ್ರಪತಿಯವರಿಗೆ ನೀಡುತ್ತದೆ.



ನಿಮ್ಮದೊಂದು ಉತ್ತರ