ರಕ್ಷಣಾ ಪಡೆಗಳ ದೃಷ್ಟಿಕೋನ, 2047
ರಕ್ಷಣೆ
ಇದೀಗ ಸುದ್ದಿಯಲ್ಲಿದೆ:
- ಇತ್ತೀಚಿಗೆ, ಕೇಂದ್ರ ರಕ್ಷಣಾ ಸಚಿವರು ‘ರಕ್ಷಣಾ ಪಡೆಗಳ ದೃಷ್ಟಿಕೋನ 2047: ಭವಿಷ್ಯಕ್ಕೆ ಸಜ್ಜಾದ ಭಾರತೀಯ ಸೇನೆಗಾಗಿನ ಮಾರ್ಗಸೂಚಿ’ ಎಂಬ ಮಹತ್ವದ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ದಾಖಲೆಯನ್ನು ‘ಸಮಗ್ರ ರಕ್ಷಣಾ ಸಿಬ್ಬಂದಿ ಕೇಂದ್ರ ಕಚೇರಿ’ಯು ಸಿದ್ಧಪಡಿಸಿದೆ.
ಉದ್ದೇಶಗಳು:
- ಭವಿಷ್ಯದ ಯುದ್ಧ ಸಿದ್ಧತೆಗಳು:- ಸೈಬರ್, ಬಾಹ್ಯಾಕಾಶ, ಕೃತಕ ಬುದ್ಧಿಮತ್ತೆ (AI) ಮತ್ತು ಮಾಹಿತಿ ಯುದ್ಧವೂ ಸೇರಿದಂತೆ ಬಹು-ಕ್ಷೇತ್ರದ ಯುದ್ಧಗಳಿಗೆ ಭಾರತೀಯ ಸೇನೆಯನ್ನು ಸಜ್ಜುಗೊಳಿಸುವುದಕ್ಕೆ ಈ ದೃಷ್ಟಿಕೋನವು ವಿಶೇಷ ಒತ್ತು ನೀಡುತ್ತದೆ.
- ರಾಷ್ಟ್ರೀಯ ಅಭಿವೃದ್ಧಿ ಗುರಿಗಳೊಂದಿಗೆ ಸಮನ್ವಯ:- ರಕ್ಷಣಾ ಸಾಮರ್ಥ್ಯಗಳ ಈ ಸಮಗ್ರ ಪರಿವರ್ತನೆಯನ್ನು, 2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ನಿರ್ಮಿಸುವ ವಿಶಾಲ ಉದ್ದೇಶದೊಂದಿಗೆ ಬೆಸೆಯಲಾಗಿದೆ.
ಈ ಮಾರ್ಗಸೂಚಿಯ ಪ್ರಮುಖ ಲಕ್ಷಣಗಳು:
- ಸಮಗ್ರ ಮತ್ತು ಬಹು-ಕ್ಷೇತ್ರಗಳ ಸೇನೆ:- ಭೂಮಿ, ಸಮುದ್ರ, ವಾಯು, ಸೈಬರ್ ಮತ್ತು ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಯಶಸ್ವಿ ಕಾರ್ಯಾಚರಣೆಗಳನ್ನು ನಡೆಸುವ ಸಾಮರ್ಥ್ಯವುಳ್ಳ ಸಮಗ್ರ ಹಾಗೂ ಚುರುಕಾದ ಸೇನಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಈ ದೃಷ್ಟಿಕೋನವು ಪ್ರಸ್ತಾಪಿಸಿದೆ.
- ಸೇನೆಯ ದಕ್ಷತೆ ಮತ್ತು ತ್ವರಿತ ಪ್ರತಿಕ್ರಿಯೆ ನೀಡುವ ಸಾಮರ್ಥ್ಯ ಸುಧಾರಿಸುವುದು:- ಮೂರೂ ಸೇನಾ ಪಡೆಗಳ (ಭೂಸೇನೆ, ನೌಕಾಪಡೆ ಮತ್ತು ವಾಯುಪಡೆ) ನಡುವೆ ಜಂಟಿ ಕಾರ್ಯಾಚರಣೆಯ ಯೋಜನೆಗಳನ್ನು ಬಲಪಡಿಸುವುದರಿಂದ ಗಣನೀಯವಾಗಿ ಸುಧಾರಿಸಲಿದೆ.
- ರಕ್ಷಣಾ ವಲಯದಲ್ಲಿ ಸ್ವಾವಲಂಬನೆಯ ಬಲವರ್ಧನೆ:- ರಕ್ಷಣಾ ಉಪಕರಣಗಳ ಉತ್ಪಾದನೆಯಲ್ಲಿ ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ‘ಆತ್ಮನಿರ್ಭರ್ ಭಾರತ್’ (ಸ್ವಾವಲಂಬಿ ಭಾರತ) ಉಪಕ್ರಮಕ್ಕೆ ಈ ಮಾರ್ಗಸೂಚಿಯು ಬಲವಾದ ಬೆಂಬಲ ನೀಡುತ್ತದೆ.
- ತಾಂತ್ರಿಕ ಪ್ರಗತಿ:- ಕೃತಕ ಬುದ್ಧಿಮತ್ತೆ, ಸ್ವಾಯತ್ತ ವ್ಯವಸ್ಥೆಗಳು , ಸೈಬರ್ ಸಾಮರ್ಥ್ಯಗಳು ಮತ್ತು ಸುಧಾರಿತ ಕಣ್ಗಾವಲು ಸಾಧನಗಳಂತಹ ಉದಯೋನ್ಮುಖ ತಂತ್ರಜ್ಞಾನಗಳ ಹೆಚ್ಚಿನ ಬಳಕೆಗೆ ಈ ವರದಿಯು ಶಿಫಾರಸು ಮಾಡಿದೆ.
ಮುಖ್ಯ ಚುನಾವಣಾ ಆಯುಕ್ತರ ವಜಾಗೊಳಿಸುವ ಪ್ರಕ್ರಿಯೆ
ರಾಜಕೀಯ
ಇದೀಗ ಸುದ್ದಿಯಲ್ಲಿದೆ:
- ವಿರೋಧ ಪಕ್ಷಗಳು ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾದ (CEC) ಜ್ಞಾನೇಶ್ ಕುಮಾರ್ ಅವರ ವಿರುದ್ಧ ಸಂಸತ್ತಿನಲ್ಲಿ ಅವರನ್ನು ವಜಾಗೊಳಿಸಲು ಮಹಾಭಿಯೋಗ ನಿರ್ಣಯವನ್ನು ಮಂಡಿಸಲು ಚಿಂತನೆ ನಡೆಸುತ್ತಿವೆ.
‘ಸಂವಿಧಾನದ 324ನೇ ವಿಧಿ’ಯ ಬಗ್ಗೆ:
-
- ಭಾರತದ ಸಂವಿಧಾನದ 324ನೇ ವಿಧಿಯ ಪ್ರಕಾರ, ಭಾರತದ ಚುನಾವಣಾ ಆಯೋಗವು (ECI) ಒಬ್ಬರು ಮುಖ್ಯ ಚುನಾವಣಾ ಆಯುಕ್ತರನ್ನು (CEC) ಹಾಗೂ ರಾಷ್ಟ್ರಪತಿಗಳು ನಿರ್ಧರಿಸುವಷ್ಟು ಸಂಖ್ಯೆಯ ಇತರ ಚುನಾವಣಾ ಆಯುಕ್ತರನ್ನು (ECs) ಒಳಗೊಂಡಿರುತ್ತದೆ.
- ಭಾರತದ ಚುನಾವಣಾ ಆಯೋಗವು ಈ ಕೆಳಗಿನ ಜವಾಬ್ದಾರಿಗಳನ್ನು ಹೊಂದಿದೆ:
- ಸಂಸತ್ತು, ರಾಜ್ಯ ಶಾಸಕಾಂಗಗಳು ಹಾಗೂ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಹುದ್ದೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತವಾಗಿ ಚುನಾವಣೆಗಳನ್ನು ನಡೆಸುವುದು ಹಾಗೂ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು.
- ಚುನಾವಣಾ ಆಯುಕ್ತರನ್ನು ನೇಮಕ:- ಸಂಸತ್ತಿನ ಕಾಯ್ದೆಯ ನಿಬಂಧನೆಗಳಿಗೆ ಒಳಪಟ್ಟು, ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಚುನಾವಣಾ ಆಯುಕ್ತರನ್ನು ನೇಮಕ ಮಾಡುತ್ತಾರೆ ಎಂದು ಸಂವಿಧಾನವು ಸ್ಪಷ್ಟಪಡಿಸುತ್ತದೆ.
ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸುವ ಸಾಂವಿಧಾನಿಕ ನಿಬಂಧನೆಗಳು:
-
- ಭಾರತದ ಸಂವಿಧಾನದ 324(5) ನೇ ವಿಧಿಯ ಅನ್ವಯ, ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನು ವಜಾಗೊಳಿಸುವ ಪ್ರಕ್ರಿಯೆಯ ರೀತಿಯಲ್ಲಿಯೇ ಮತ್ತು ಅದೇ ಆಧಾರಗಳ ಮೇರೆಗೆ ಮಾತ್ರ ಮುಖ್ಯ ಚುನಾವಣಾ ಆಯುಕ್ತರನ್ನು ಹುದ್ದೆಯಿಂದ ವಜಾಗೊಳಿಸಬಹುದು (ಪದಚ್ಯುತಿಗೊಳಿಸಬಹುದು).
- ಮುಖ್ಯ ಚುನಾವಣಾ ಆಯುಕ್ತರ ವಜಾ ಕೋರುವ ನಿರ್ಣಯವನ್ನು ಸಂಸತ್ತಿನ ಯಾವುದೇ ಸದನದಲ್ಲಿ (ಲೋಕಸಭೆ ಅಥವಾ ರಾಜ್ಯಸಭೆ) ಮಂಡಿಸಬಹುದು. ಆದರೆ, ಆ ನಿರ್ಣಯದಲ್ಲಿ ವಜಾಗೊಳಿಸಲು ಇರುವ ನಿಖರವಾದ ಕಾರಣಗಳನ್ನು ಸ್ಪಷ್ಟವಾಗಿ ನಮೂದಿಸಿರಬೇಕು.
- ಈ ನಿರ್ಣಯವನ್ನು ಮಂಡಿಸಲು ಕೆಳಕಂಡ ರೀತಿಯಲ್ಲಿ ಬೆಂಬಲ ಅಗತ್ಯವಿರುತ್ತದೆ:
-
-
- ಲೋಕಸಭೆಯ ಕನಿಷ್ಠ 100 ಸದಸ್ಯರ ಬೆಂಬಲ, ಅಥವಾ
-
- ರಾಜ್ಯಸಭೆಯ ಕನಿಷ್ಠ 50 ಸದಸ್ಯರ ಬೆಂಬಲ.
- ಒಮ್ಮೆ ಈ ನಿರ್ಣಯವನ್ನು ಅಂಗೀಕರಿಸಿದ ನಂತರ, ಆರೋಪಗಳ ಕುರಿತು ತನಿಖೆ ನಡೆಸಲು ಲೋಕಸಭೆಯ ಸಭಾಧ್ಯಕ್ಷರು ಅಥವಾ ರಾಜ್ಯಸಭೆಯ ಸಭಾಪತಿಯವರು ಒಂದು ವಿಚಾರಣಾ ಸಮಿತಿಯನ್ನು ರಚಿಸುತ್ತಾರೆ.
- ಒಂದು ವೇಳೆ ಈ ಸಮಿತಿಯು ಆರೋಪಗಳು ಸಾಬೀತಾಗಿವೆ ಎಂದು ವರದಿ ನೀಡಿದರೆ, ಆ ನಿರ್ಣಯವನ್ನು ಸಂಸತ್ತಿನಲ್ಲಿ ಮತದಾನಕ್ಕೆ ತೆಗೆದುಕೊಳ್ಳಲಾಗುತ್ತದೆ.
- ನಂತರ, ಎರಡೂ ಸದನಗಳು ಹಾಜರಿರುವ ಮತ್ತು ಮತ ಚಲಾಯಿಸುವ ಸದಸ್ಯರ ಪೈಕಿ ಮೂರನೇ ಎರಡರಷ್ಟು (2/3ರಷ್ಟು) ‘ವಿಶೇಷ ಬಹುಮತ’ದೊಂದಿಗೆ ಆ ನಿರ್ಣಯವನ್ನು ಅಂಗೀಕರಿಸಬೇಕು. ಎರಡೂ ಸದನಗಳು ಈ ನಿರ್ಣಯವನ್ನು ಒಪ್ಪಿದ ನಂತರ, ಅಂತಿಮವಾಗಿ ರಾಷ್ಟ್ರಪತಿಗಳು ವಜಾಗೊಳಿಸುವ ಆದೇಶವನ್ನು ಹೊರಡಿಸುತ್ತಾರೆ.
ರಾಷ್ಟ್ರೀಯ ಅಣೆಕಟ್ಟು ಸುರಕ್ಷತೆ ಪ್ರಾಧಿಕಾರ (NDSA)
ಆಡಳಿತ
ಇದೀಗ ಸುದ್ದಿಯಲ್ಲಿದೆ:
- ನವದೆಹಲಿಯ ಆರ್.ಕೆ. ಪುರಂನಲ್ಲಿ ‘ರಾಷ್ಟ್ರೀಯ ಅಣೆಕಟ್ಟು ಸುರಕ್ಷತೆ ಪ್ರಾಧಿಕಾರ’ದ (NDSA) ನೂತನ ಕಚೇರಿಯನ್ನು ಇತ್ತೀಚಿಗೆ ಉದ್ಘಾಟಿಸಲಾಯಿತು.
ರಾಷ್ಟ್ರೀಯ ಅಣೆಕಟ್ಟು ಸುರಕ್ಷತೆ ಪ್ರಾಧಿಕಾರ (NDSA)ದ ಬಗ್ಗೆ:
- ಶಾಸನಬದ್ಧ ಸಂಸ್ಥೆಯಾಗಿದೆ:- ರಾಷ್ಟ್ರೀಯ ಅಣೆಕಟ್ಟು ಸುರಕ್ಷತೆ ಪ್ರಾಧಿಕಾರವು ‘ಅಣೆಕಟ್ಟು ಸುರಕ್ಷತಾ ಕಾಯ್ದೆ, 2021’ ರ ಅಡಿಯಲ್ಲಿ ಸ್ಥಾಪಿಸಲಾಗಿದೆ.
- ಕಾರ್ಯಾನಿರ್ವಹಣೆ:- ಕೇಂದ್ರ ‘ಜಲಶಕ್ತಿ ಸಚಿವಾಲಯ
- ಉದ್ದೇಶ:- ಭಾರತದಲ್ಲಿ ಅಣೆಕಟ್ಟುಗಳ ಸುರಕ್ಷತೆಯನ್ನು ಖಾತರಿಪಡಿಸುವ ‘ರಾಷ್ಟ್ರೀಯ ಮಟ್ಟದ ನಿಯಂತ್ರಕ ಸಂಸ್ಥೆ’ಯಾಗಿ ಕಾರ್ಯನಿರ್ವಹಿಸುವುದು.
ಪ್ರಮುಖ ಡಿಜಿಟಲ್ ಉಪಕ್ರಮಗಳು:
- ನೇತ್ರಾ (NETRA):- ಇದು ಕೃತಕ ಬುದ್ಧಿಮತ್ತೆಯನ್ನು (AI) ಬಳಸಿಕೊಂಡು ಅಣೆಕಟ್ಟುಗಳ ಮೇಲ್ವಿಚಾರಣೆ ಮತ್ತು ವಿಮರ್ಶೆ ನಡೆಸುವ ವ್ಯವಸ್ಥೆಯಾಗಿದೆ. ಈ ತಂತ್ರಜ್ಞಾನವನ್ನು ‘ಧರ್ಮ’ (DHARMA) ಎಂಬ ಅಣೆಕಟ್ಟು ಸುರಕ್ಷತಾ ದತ್ತಾಂಶ ಕೇಂದ್ರದೊಂದಿಗೆ ಸಂಯೋಜಿಸಲಾಗಿದೆ.
- ರಾಷ್ಟ್ರೀಯ ಬಾಂಧ್ ಸುರಕ್ಷಾ ದರ್ಪಣ್ (RBSD):- ಅಣೆಕಟ್ಟು ಕುಸಿತದ ವಿಶ್ಲೇಷಣೆಯ (DBA) ಕುರಿತು ನಿಖರವಾದ ನೈಜ ಚಿತ್ರಣವನ್ನು ಒದಗಿಸಲು (ಅಥವಾ ದೃಶ್ಯರೂಪದಲ್ಲಿ ಪ್ರಸ್ತುತಪಡಿಸಲು) ಈ ಡಿಜಿಟಲ್ ವೇದಿಕೆಯನ್ನು ರೂಪಿಸಲಾಗಿದೆ. ಇದನ್ನು ‘ಸುಧಾರಿತ ಕಂಪ್ಯೂಟಿಂಗ್ ಅಭಿವೃದ್ಧಿ ಕೇಂದ್ರ’ವು (C-DAC) ಅಭಿವೃದ್ಧಿಪಡಿಸಿದೆ.



ನಿಮ್ಮದೊಂದು ಉತ್ತರ